ಬಂಟ್ವಾಳ: ಮೊಬೈಲ್ ಗೀಳಿನಿಂದ ಮಹಡಿ ಮೇಲಿನಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಬಲಿ
Tuesday, April 2, 2024
ಬಂಟ್ವಾಳ: ಮೊಬೈಲ್ ನೋಡುತ್ತಾ ಮನೆಯ ಮಹಡಿ ಮೇಲಿಂದ ಕೆಳಗೆಬಿದ್ದು 15ವರ್ಷದ ಒಂಬತ್ತನೇ ತರಗತಿಯ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ಆದೀಶ್ ಮೃತಪಟ್ಟ ವಿದ್ಯಾರ್ಥಿ. ಈತ ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ.
ಆದೀಶ್ ಗೆ ಮೊಬೈಲ್ ಗೀಳು ಇದ್ದು, ಸದಾ ಮೊಬೈಲ್ ನಲ್ಲೇ ಇರುತ್ತಿದ್ದ. ಆತ ತನ್ನ ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದಾನೆ. ಈ ವೇಳೆ ಆಯತಪ್ಪಿ ಮನೆಯ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಟ್ಟೆ ಒಗೆಯುವ ಕಲ್ಲಿನ ಮೇಲೆ ಬಿದ್ದಿದ್ದರಿಂದ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದ ಒಬ್ಬನೇ ಮಲಗುವ ಅಭ್ಯಾಸವಿದ್ದ ಆದೀಶ್, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ ಎನ್ನಲಾಗಿದೆ.