ಮತದಾನ ಗುರುತಿನ ಚೀಟಿ ಇಲ್ಲದಿದ್ದರೆ ಓಟು ಹಾಕುವುದು ಹೇಗೆ
Thursday, April 25, 2024
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಪ್ರಾರಂಭ ಆಗುತ್ತಿದೆ ಏ.26ರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ
ಮೊದಲ ಹಂತದ ಚುನಾವಣೆ ನಡೆಯಲಿದೆ . 6 ಗಂಟೆ ನಂತರ ಮತಗಟ್ಟಿಗೆ ನೋ ಎಂಟ್ರಿ ಬೋರ್ಡ್ ಹಾಕಲಾಗುತ್ತದೆ.14 ಕ್ಷೇತ್ರಗಳಲ್ಲಿ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ನಡೆಸಿಕೊಂಡಿದೆ . ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಮಾಡಲು ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಹೋಗುವುದು ಅಗತ್ಯ . ಮತದಾರರ ಗುರುತಿನ ಚೀಟಿ ಮರೆತು ಹೋದರೆ ಏನು ಮಾಡುವುದು ಪರ್ಯಾಯ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದ ದಾಖಲೆಗಳ ವಿವರ ಇಲ್ಲಿದೆ
* ಆಧಾರ್ ಕಾರ್ಡ್
* ಜಾಬ್ ಕಾರ್ಡ್
* ಡ್ರೈವಿಂಗ್ ಲೈಸನ್ಸ್
* ಪಾನ್ ಕಾರ್ಡ್
* ಭಾರತೀಯ ಪಾಸ್ ಪೋರ್ಟ್
* ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
* ಎನ್‌ಪಿಆರ್ ಅಡಿಯಲ್ಲಿ ಸ್ಮಾರ್ಟ್ ಕಾರ್ಡ್
* ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್ ಬುಕ್
* ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
* ರಾಜ್ಯ, ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ
* ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು
* ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು ಎಂದು ಹೇಳಲಾಗಿದೆ.
ಮತದಾನ ನಿಮ್ಮ ಹಕ್ಕು. ಕಡ್ಡಾಯವಾಗಿ ಮತದಾನ ಮಾಡಿ ಸದೃಢ ದೇಶದ ಬೆಳವಣಿಗೆ ಸಹಕರಿಸಿ. ಇಲ್ಲದಿದ್ದರೆ ಏನು ಮಾಡುವುದು