ಬೆಂಗಳೂರಿನಲ್ಲಿ ಮುಂಜಾನೆ ಹೊತ್ತು ಉರಿದ ಟಯರ್ ಅಂಗಡಿ
ಬೆಂಗಳೂರು: ಚಾಮರಾಜಪೇಟೆಯ ಟಿಆರ್ ಮೀಲ್ ಬಳಿ ಟಯರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡವು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿರುವ ಶಂಕೆ .
ಮುಂಜಾನೆ 4:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. 5:30 ಸಮಯಕ್ಕೆ ಪೊಲೀಸರು ಮನೆಯಿಂದ ಎಲ್ಲರೂ ಹೊರಗಡೆ ಬರುವಂತೆ ಅನೌನ್ಸ್ ಮಾಡಿದರು. ಅಕ್ಕಪಕ್ಕದ 20ಕ್ಕೂ ಹೆಚ್ಚು ಮನೆಗಳ ಜನರನ್ನು ಪೊಲೀಸರು ಖಾಲಿ ಮಾಡಿಸಿದ್ದಾರೆ ಎಂದು ತಿಳಿದಿದೆ. ಬೆಂಕಿ ತಗಲಿರೋ ಕಟ್ಟಡದಲ್ಲಿ 8 ಟಯರ್ ಅಂಗಡಿಗಳು ಇದ್ದು, ಎಲ್ಲ ಅಂಗಡಿಗಳು ಕೂಡ ಹೊತ್ತಿ ಉರಿಯುತ್ತಿವೆ.
3 ಗಂಟೆಯಿಂದ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೂ ಕಂಟ್ರೋಲ್ ರೂಂನಲ್ಲಿ ಪಬ್ಲಿಕ್ ಕಾಲ್ ಪಿಕ್ ಮಾಡಿಲ್ಲ. ನಾಲ್ಕೂವರೆ ಸುಮಾರಿಗೆ ಬಂದು ಬೆಂಕಿ ನಂದಿಸೋ ಕೆಲಸ ಮಾಡಲಾಗುತ್ತಿದೆ. ಒಂದೂವರೆ ಗಂಟೆ ತಡವಾಗಿ ಅಗ್ನಿಶಾಮಕ ವಾಹನಗಳು ಬಂದ ಕಾರಣ ಗೋಡೌನ್ ಸಂಪೂರ್ಣವಾಗಿ ಬೆಂಕಿ ಅವರಿಸಿಕೊಂಡಿದೆ ಎನ್ನಲಾಗಿದೆ.
ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.