ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಶುರು ,ಉಚಿತ ಬಸ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ
Monday, April 29, 2024
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸೋಮವಾರದಿಂದ (ಏಪ್ರಿಲ್ 29) ನಡೆಯಲಿರುವ ಪೂರಕ ಪರೀಕ್ಷೆಗಳಿಗೆ (ಪರೀಕ್ಷೆ-2) ಹಾಜರಾಗುತ್ತಿದ್ದಾರೆ. ಇದೀಗ ಈ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯು ಸಿಹಿ ಸುದ್ದಿ ನೀಡಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುತ್ತಾರೆ.
ಹೀಗಾಗಿ ಅವರಿಗೆ ತಮ್ಮ ನಿವಾಸದಿಂದ ಬೇರೆ ಪ್ರದೇಶದಲ್ಲಿರುವ ಪರೀಕ್ಷಾ ಕೇಂದ್ರಗಳವರೆಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮುಂದಿನ ತಿಂಗಳು ಮೇ 16ರವರೆಗೆ ನಡೆಯಲಿವೆ. ಈ ಪರೀಕ್ಷೆಗಳಿಗೆ ಹಾಜರಾಗುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣವು ಅನುಕೂಲವಾಗಲಿದೆ
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದು.
ನಂತರ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ