ಸುಳ್ಯ; 16 ವರ್ಷದ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
Thursday, May 9, 2024
ಮಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಡದಲ್ಲಿ ಬುಧವಾರ ನಡೆದಿದೆ.
ಸುಳ್ಯ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡ ಡ್ಕ ಗೋಪಾಲ ಹಾಗೂ ಬಾಬಿ ದಂಪತಿ ಪುತ್ರಿ ರಶ್ಮಿತಾ (16) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.