-->
ಇವಿಎಂ ತಿರುಚಲು ₹2.5 ಕೋಟಿಗೆ ಬೇಡಿಕೆಯಿಟ್ಟಿದ್ದ ಯೋಧನ ಬಂಧನ

ಇವಿಎಂ ತಿರುಚಲು ₹2.5 ಕೋಟಿಗೆ ಬೇಡಿಕೆಯಿಟ್ಟಿದ್ದ ಯೋಧನ ಬಂಧನ

ಮುಂಬಯಿ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಇವಿಎಂನಲ್ಲಿನ ಮತದಾನದ ಮಾಹಿತಿಯನ್ನು ತಿರುಚಲು ಶಿವಸೇನೆ (ಉದ್ಧವ್ ಬಣ) ಮುಖಂಡ ಅಂಬಾದಾಸ್ ದಾನ್ವೆ ಅವರ ಬಳಿ 2.5 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಯೋಧರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

 ಆರೋಪಿಯನ್ನು 24 ವರ್ಷದ ಮಾರುತಿ ಢಾಕ್ಷೆ ಎಂದು ಗುರುತಿಸಲಾಗಿದೆ. ಈತ ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚುವ ಮೂಲಕ ನಿರ್ದಿಷ್ಟ ಅಭ್ಯರ್ಥಿಗೆ ಹೆಚ್ಚು ಮತಗಳನ್ನು ಪಡೆಯಲು ಸಹಾಯ ಮಾಡುವುದಾಗಿ ಹೇಳಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾನೆ ಎಂದು ಆರೋಪಿಸಿ ರಾಜ್ಯ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ದಾನ್ವೆ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು. 

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಸಂಭಾಜಿನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಆರೋಪಿಯು, ರಾಜೇಂದ್ರ ದಾನ್ವೆ ಅವರನ್ನು ಭೇಟಿಯಾಗಿದ್ದ. ಕೂಡಲೇ ದಾನ್ವೆನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಕ್ರಾಂತಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Ads on article

Advertise in articles 1

advertising articles 2

Advertise under the article