-->
ಪ್ರಜ್ವಲ್‌ ರೇವಣ್ಣ ವಿಡಿಯೋದಲ್ಲಿ 3 ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು SIT ಸೂಚನೆ

ಪ್ರಜ್ವಲ್‌ ರೇವಣ್ಣ ವಿಡಿಯೋದಲ್ಲಿ 3 ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು SIT ಸೂಚನೆ






ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ 3 ಮಹಿಳಾ ಸರ್ಕಾರಿ ನೌಕರರು ಇರುವುದನ್ನು SIT ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. 


ಪೆನ್‌ಡ್ರೈವ್‌ನಲ್ಲಿ ಸಿಕ್ಕಿರುವ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹಾಗೂ ಅಶ್ಲೀಲ ಫೋಟೋಗಳ ಪರಿಶೀಲನೆ ವೇಳೆ SIT ಗೆ  ಮೂರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾಗಿದೆ. ಈ ಮೂರು ಸಂತ್ರಸ್ತೆಯರನ್ನು ಸಂಪರ್ಕಿಸಿರುವ SIT ಅಧಿಕಾರಿಗಳು, ದೂರು ನೀಡುವಂತೆ ಸೂಚಿಸಿದ್ದಾರೆ. ಈ ಮೂರು ಮಂದಿ ದೂರು ನೀಡಿದಲ್ಲಿ ಪ್ರಜ್ವಲ್‌ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.



ಈಗಾಗಲೇ SIT ಅಧಿಕಾರಿಗಳು ಅಶ್ಲೀಲ ವಿಡಿಯೋಗಳು ಹಾಗೂ ಪೋಟೋಗಳಲ್ಲಿರುವ ಮಹಿಳೆಯರನ್ನು ಗುರುತಿಸಿ, ದೂರು ನೀಡುವಂತೆ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಮಹಿಳೆಯರು ಮರ್ಯಾದೆಗೆ ಅಂಜಿ ದೂರು ನೀಡಲು ಹಿಂಜರಿಯುತ್ತಿದ್ದಾರೆ.  ಈ ನಡುವೆ ತಮ್ಮ ಪ್ರಯತ್ನ ನಿಲ್ಲಿಸದ ಎಸ್‌ಐಟಿ ಅಧಿಕಾರಿಗಳು, ಆ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವುದಾಗಿ ದೈರ್ಯ ತುಂಬುತ್ತಿದ್ದಾರೆ ಎಂದು ತಿಳಿದು ಬಂದಿದೆ.    


 ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಅಪಹರಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಕೆ.ಆರ್‌.ನಗರದ ಮಹಿಳೆಯನ್ನು ಶನಿವಾರ ರಕ್ಷಿಸಿದ್ದಾರೆ. ಈ ಮಹಿಳೆಯ ಪುತ್ರ ನೀಡಿರುವ ಅಪಹರಣದ ದೂರಿನಲ್ಲಿ ‘ನನ್ನ ತಾಯಿಯ ಮೇಲೆ ಪ್ರಜ್ವಲ್‌ ರೇವಣ್ಣ ಬಲಾತ್ಕಾರ ನಡೆಸಿರುವ ಬಗ್ಗೆ ನನ್ನ ಸಂಬಂಧಿಕರು ಹಾಗೂ ಸ್ನೇಹಿತರು ಹೇಳಿದ್ದಾರೆ. ಬಲಾತ್ಕಾರದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬಗ್ಗೆ ತಿಳಿಸಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಇದೀಗ ಎಸ್ಐಟಿ ಅಧಿಕಾರಿಗಳು ಮಹಿಳೆಯ ಹೇಳಿಕೆ ದಾಖಲಿಸಲು ಮುಂದಾಗಿದ್ದಾರೆ. ಮಹಿಳೆ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪ್ರಜ್ವಲ್‌ ವಿರುದ್ಧ ರೇಪ್ ಆರೋಪದಡಿ ಮತ್ತೊಂದು ಎಫ್‌ಐಆರ್‌ ದಾಖಲಾಗುವ ಸಾಧ್ಯತೆಯಿದ್ದು, ಮತ್ತಷ್ಟು ಸಂಕಷ್ಟ ಎದುರಾಗಲಿದೆ.

Ads on article

Advertise in articles 1

advertising articles 2

Advertise under the article