ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸುಸೈಡ್ Guest-lecture-suicide-in-hasana
Friday, May 10, 2024
ಹಾಸನ : ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಿವಾಹಿತ ಉಪನ್ಯಾಸಕಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಹಾಸನದ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚನ್ನರಾಯಪಟ್ಟಣದ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿ ದೀಪಾ (34) ಎಂದು ಗುರುತಿಸಲಾಗಿದೆ.
ಓದಿನಲ್ಲಿ ಮುಂದಿದ್ದ ದೀಪಾ ಸ್ಥಳೀಯವಾಗಿಯೇ ತನ್ನ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿ ಆಗಿ ಸೇವೆ ಸಲ್ಲಿಸುತ್ತಿದ್ದಳು. ಆದರೆ, ಇವರು ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರಲ್ಲಿ ಆಘಾತ ತಂದೊಡ್ಡಿದೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.