ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಮಧ್ಯ ಮಯಸ್ಕರಿಬ್ಬರು ಅರೆಸ್ಟ್
Wednesday, May 1, 2024
ಮಂಗಳೂರು: ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಲ್ಲಿ ಮಧ್ಯ ವಯಸ್ಕರಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕುಂಪಲ ಕುಜುಮಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡು ನಿವಾಸಿ ಗಂಗಾಧರ್ ಬಂಧಿತ ಆರೋಪಿಗಳು.
ಕೊಲ್ಯದ ದೇವಸ್ಥಾನವೊಂದರ ಕಲ್ಯಾಣ ಮಂಟಪದಲ್ಲಿ ರವಿವಾರ ಕುಟುಂಬಸ್ಥರ ಮದುವೆಗೆಂದು ಬಂಟ್ವಾಳ ಮೂಲದ ಬಾಲಕಿ ಆಗಮಿಸಿದ್ದಳು. ಆಕೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದಾಗ ಆರೋಪಿಗಳಿಬ್ಬರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು. ಈ ಬಗ್ಗೆ ಸಂತ್ರಸ್ತೆ ಉಳ್ಳಾಲ ಠಾಣೆಯಲ್ಲಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಆರೋಪಿ ಗಳನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.