-->
ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ಹಾಲಿನ ದರದಲ್ಲೂ 2ರೂ. ಏರಿಕೆ : ಪರಿಷ್ಕೃತ ದರ ನಾಳೆಯಿಂದಲೇ ಜಾರಿ

ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ಹಾಲಿನ ದರದಲ್ಲೂ 2ರೂ. ಏರಿಕೆ : ಪರಿಷ್ಕೃತ ದರ ನಾಳೆಯಿಂದಲೇ ಜಾರಿ


ಬೆಂಗಳೂರು: ಪೆಟ್ರೋಲ್ ದರ ಏರಿಕೆಯ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗಿದೆ. ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನಂದಿನಿ ಹಾಲಿನ ದರವನ್ನು ನಾಳೆಯಿಂದಲೇ ಹೆಚ್ಚಳ ಮಾಡಿದೆ. 

ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಕೆಎಂಎಫ್ ಮುಖ್ಯ ಕಚೇರಿಯಲ್ಲಿ ನಡೆಸಿರುವ ಸುದ್ದಿಗೋಷ್ಠಿಯಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

ಒಂದು ಲೀ. ನಂದಿನಿ ಹಾಲಿನ ಪ್ಯಾಕೆಟ್‌ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುತ್ತದೆ. ಸದ್ಯ ಲೀ. ಹಾಲಿಗಿರುವ 42 ರೂ. ದರವನ್ನು 2 ರೂ. ಹೆಚ್ಚಳ ಮಾಡಲಾಗುವುದು. ಜೂ.26ರಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ ಎಂದು ಭೀಮಾನಾಯ್ಕ ತಿಳಿಸಿದರು.

ಅರ್ಧ ಲೀಟ‌ರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆಯಾಗುವುದಿಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರೂಪಾಯಿಯಿದೆ. ಗುಜರಾತ್ ನಲ್ಲಿ ಅಮುಲ್ ಒಂದು ಲೀಟರ್‌ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದಿಲ್ಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾ ನಾಯ್ಕ ಹೇಳಿದರು.

ಕೆಎಂಎಫ್‌ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

Ads on article

Advertise in articles 1

advertising articles 2

Advertise under the article