ಮಂಗಳೂರು: ವೆನ್ಲಾಕ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ನಿಂದ ವ್ಯಕ್ತಿಗೆ ಹಲ್ಲೆ - ದೂರು ದಾಖಲು
Tuesday, June 18, 2024
ಮಂಗಳೂರು: ಇಲ್ಲಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಆಗಮಿಸಿದ ವ್ಯಕ್ತಿಯೊಬ್ಬರ ಮೇಲೆ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹಲ್ಲೆಗೈದಿರುವ ಘಟನೆ ರವಿವಾರ ನಡೆದಿದೆ.
ಬೆಳ್ತಂಗಡಿ ನಿವಾಸಿ ಶುಭಕರ ಹಲ್ಲೆಗೆ ಒಳಗಾಗದವರು. ಈ ಬಗ್ಗೆ ವೆನ್ಲಾಕ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ಕೆಗ್ಗಪ್ಪ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಸೆಕ್ಯೂರಿಟಿ ಗಾರ್ಡ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆಯೂ ವೆನ್ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್‌ಗಳ ವರ್ತನೆ ವಿರುದ್ಧ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು.