MANGALORE- ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಅತ್ಯಾಚಾರ!
Saturday, June 8, 2024
ಮಂಗಳೂರು,: ಮದುವೆಯಾಗುವುದಾಗಿ ನಂಬಿಸಿದ ಯುವಕನೊಬ್ಬ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಯುವತಿಯನ್ನು ಅತ್ಯಾಚಾರವೆಸಗಿರುವ ಘಟನೆಯ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ಯುವತಿ ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ ವಿನೋದ್‌ರಾಜ್ ಎಂಬಾತನ ಸ್ನೇಹವಾಗಿತ್ತು. ಮಾ.23ರಂದು ಆಕೆ ಮನೆಯಲ್ಲೇ ಇದ್ದಾಗ ಅಲ್ಲಿಗೆ ಬಂದ ಆರೋಪಿಯು ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಆ ಬಳಿಕವೂ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ನಂತರ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯು ಮಹಿಳಾ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.