MANGALORE:: ವಿದ್ಯುತ್ ತಂತಿ ಸ್ಪರ್ಶಗೊಂಡು ರಿಕ್ಷಾ ಚಾಲಕರಿಬ್ಬರ ದಾರುಣ ಸಾವು
Thursday, June 27, 2024
ಮಂಗಳೂರು:
ವಿದ್ಯುತ್ ತಂತಿ ಸ್ಪರ್ಶಗೊಂಡು ರಿಕ್ಷಾ ಚಾಲಕರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
ರಾಜು
ಮತ್ತು ದೇವರಾಜು ಮೃತಪಟ್ಟ ರಿಕ್ಷಾ ಚಾಲಕರು . ಇವರಲ್ಲಿ ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು ಎಂದು ತಿಳಿದು ಬಂದಿದೆ. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿಯ ಬಾಡಿಗೆಕೊಠಡಿಯಲ್ಲಿ ವಾಸವಾಗಿದ್ದರು.