ಆರೋಗ್ಯ ವಿ.ವಿ. ಕಬಡ್ಡಿ: ಆಳ್ವಾಸ್ ಚಾಂಪಿಯನ್ , ಮಹಿಳಾ ವಿಭಾಗದಲ್ಲಿ ಉಜಿರೆ ಎಸ್‌ಡಿಎಂಗೆ ಪ್ರಶಸ್ತಿ
ಮೂಡುಬಿದಿರೆ:
ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ.
ಆಳ್ವಾಸ್
ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ಬುಧವಾರ ನಡೆದ ಪುರುಷರ ಫೈನಲ್‌ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್
ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ಮಣಿಸಿದ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಪ್ರಶಸ್ತಿ ಎತ್ತಿ ಹಿಡಿಯಿತು.
ಮಹಿಳಾ
ವಿಭಾಗದಲ್ಲಿ ಬಾಗಲಕೋಟೆಯ ಸಜ್ಜಲಶ್ರೀ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಕಾಲೇಜನ್ನು ಮಣಿಸಿದ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆತಿಥೇಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ತೃತೀಯ ಸ್ಥಾನ ಪಡೆಯಿತು.
ಪುರುಷರ
ವಿಭಾಗದಲ್ಲಿ ಅತ್ಯುತ್ತಮ ರೈಡರ್ ಆಗಿ ಎ.ಜೆ. ಇನ್ಸ್ಟಿಟ್ಯೂಟ್
ಆಫ್ ಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿ ವೀರೇಶ್ ಅತ್ಯುತ್ತಮ ಡಿಫೆಂಡರ್ ಆಗಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಹೇಮಂತ್ ಜಿ.ವೈ, ಅತ್ಯುತ್ತಮ
ಆಲ್ ರೌಂಡರ್ ಆಗಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮಹಮ್ಮದ್ ಸತಾರ್ ಪುರಸ್ಕೃತರಾದರು.
ಮಹಿಳಾ
ಅತ್ಯುತ್ತಮ ರೈಡರ್ ಆಗಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ಮಾನಸ, ಎಸ್‌ಡಿಎಮ್ ಅತ್ಯುತ್ತಮ ರಕ್ಷಕರಾಗಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಎಸ್‌ಡಿಎಮ್ ನ ಪ್ರಗತಿ ಅತ್ಯುತ್ತಮ
ಆಲ್‌ರೌಂಡರ್ ಆಗಿ ಸಜನಶ್ರೀ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ಸ್‌ನ ನಂದಿತಾ ವೈಯಕ್ತಿಕ
ಪ್ರಶಸ್ತಿ ಪಡೆದುಕೊಂಡರು.
ಸಮಾರೋಪ:
ಪದ್ಮಶ್ರೀ ಅನಿಲ ಏಜೆನ್ಸಿ ವ್ಯವಸ್ಥಾಪಕ ಪಾಲುದಾರ ಅಭಿಜಿತ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೀಕ್ಷಕರಾದ ಧರ್ಮೇಂದ್ರ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ವನಿತಾ ಶೆಟ್ಟಿ,
ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ರೋಶನ್ ಪಿಂಟೊ
ಇದ್ದರು.