-->
Ullala: ಬೋಳಿಯಾರು ಚೂರಿ ಇರಿತ ಪ್ರಕರಣ - ಐವರು ಅರೆಸ್ಟ್ - ಘೋಷಣೆ ಕೂಗಿದ್ದವರ ಮೇಲೂ ಪ್ರಕರಣ ದಾಖಲು

Ullala: ಬೋಳಿಯಾರು ಚೂರಿ ಇರಿತ ಪ್ರಕರಣ - ಐವರು ಅರೆಸ್ಟ್ - ಘೋಷಣೆ ಕೂಗಿದ್ದವರ ಮೇಲೂ ಪ್ರಕರಣ ದಾಖಲು

ಉಳ್ಳಾಲ: ನಗರದ ಬೋಳಿಯಾರುವಿನಲ್ಲಿ ವಿಜಯೋತ್ಸವದ ಬಳಿಕ ನಡೆದ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ನಡೆದ ಚೂರಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಣಾಜೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು ಅಲಿಯಾಸ್ ಹಫೀಜ್ (24) ಬಂಧಿತ ಆರೋಪಿಗಳು.

ರವಿವಾರ ಪ್ರಧಾನಿ ಮೋದಿಯವರ ಪದಗ್ರಹಣದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆದಿತ್ತು. ಈ ವೇಳೆ ಮಸೀದಿಯ ಮುಂಭಾಗ ಹಿಂದೂ ಕಾರ್ಯಕರ್ತರು ಘೋಷಣೆ ಕೂಗಿದ್ದರು‌. ಇದರಿಂದ ಕುಪಿತಗೊಂಡ 25-30 ಯುವಕರ ತಂಡ ಇಬ್ಬರಿಗೆ ಚೂರಿಯಿಂದ ಇರಿದಿದೆ‌. ರಾತ್ರಿ 9 ಗಂಟೆಗೆ ಚೂರಿ ಇರಿತದ ವಿಚಾರ ತಿಳಿಯುತ್ತಿದ್ದಂತೆ ಬೋಳಿಯಾರಿನಲ್ಲಿ ಎರಡೂ ಕೋಮಿನವರು ಸೇರಿದ್ದಾರೆ. ಬಳಿಕ ಪೊಲೀಸರು ಅವರನ್ನು ಚದುರಿಸುವ ಪ್ರಯತ್ನ ಮಾಡಿದ್ದರು. ಮಧ್ಯರಾತ್ರಿ ಕೋಣಾಜೆ ಠಾಣೆಯ ಮುಂದೆ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ಘಟನೆ ನಡೆದ ಬಾ‌ರ್ ಮುಂಭಾಗದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಈ ನಡುವೆ ಬೋಳಿಯಾರು ಜುಮ್ಮಾ ಮಸೀದಿ ಕಮಿಟಿಯ ಅಧ್ಯಕ್ಷ ಪಿ.ಕೆ ಅಬ್ದುಲ್ಲಾ ನೀಡಿರುವ ದೂರಿನಂತೆ ಕೊಣಾಜೆ ಠಾಣೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ಬಳಿಕ ಕೆಲವು ಕಾರ್ಯಕರ್ತರು ಮಸೀದಿ ಮುಂಭಾಗದಲ್ಲಿ ಭಾರತ್‌ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದರು. ಆಮೂಲಕ ಅಲ್ಲಿದ್ದ ಮುಸ್ಲಿಂ ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಇದರ ಸಿಸಿಟಿವಿ ವೀಡಿಯೋವನ್ನೂ ಮಸೀದಿಯವರು ಬಿಡುಗಡೆ ಮಾಡಿದ್ದಾರೆ. ಈ ದೂರನ್ನು ಆಧರಿಸಿ ಪೊಲೀಸರು ಸೆಕ್ಷನ್ 143, 147, 148, 153ಎ, 504, 506, 149 ಅನ್ವಯ ವಿನಯ್, ಸುಭಾಶ್‌, ರಂಜಿತ್, ಧನಂಜಯ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article