ಪೋಕ್ಸೋ ಕೇಸ್: ಬಿ.ಎಸ್.ಯಡಿಯೂರಪ್ಪ ಬಂಧಿಸದಂತೆ ಹೈಕೋರ್ಟ್ ನಿರ್ದೇಶನ - Yadiyurappa POCSO Case
Friday, June 14, 2024
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸುವಂತಹ ಕಠಿಣ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್ ಇಂದು ನಿರ್ದೇಶನ ನೀಡಿದೆ.
ಪ್ರಕರಣದ ಆರೋಪಿಯಾಗಿರುವ ಬಿ.ಎಸ್ ವೈ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಅರ್ಜಿದಾರರು ತಿಳಿಸಿರುವಂತೆ ಜುಲೈ 17ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಒಳಗಾಗಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.
ಹೀಗಾಗಿ, ಬಿ.ಎಸ್.ಯಡಿಯೂರಪ್ಪನವರಿಗೆ ಮುಂದಿನ ವಿಚಾರಣೆವರೆಗೂ ಬಿಗ್ ರಿಲೀಫ್ ಸಿಕ್ಕಿದೆ.