-->
ಭಾರಿ ಮಳೆ- ದ.ಕ ಜಿಲ್ಲೆಯಲ್ಲಿ ನಾಳೆ ( ಜು.16) ಶಾಲೆ, ಪಿಯುಸಿಗೆ ರಜೆ

ಭಾರಿ ಮಳೆ- ದ.ಕ ಜಿಲ್ಲೆಯಲ್ಲಿ ನಾಳೆ ( ಜು.16) ಶಾಲೆ, ಪಿಯುಸಿಗೆ ರಜೆ

 




ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ)  ರಜೆಯನ್ನು ಘೋಷಿಸಲಾಗಿದೆ.


 ಈ ವೇಳೆ  ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ

ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.





Ads on article

Advertise in articles 1

advertising articles 2

Advertise under the article