-->
ರೆಡ್‌ ಅಲರ್ಟ್  ಮಳೆ: ನಾಳೆ ( ಜುಲೈ 20) ದ.ಕ ಜಿಲ್ಲೆಯಾದ್ಯಂತ ಶಾಲೆ  , ಪಿಯುಸಿಗೆ ರಜೆ

ರೆಡ್‌ ಅಲರ್ಟ್ ಮಳೆ: ನಾಳೆ ( ಜುಲೈ 20) ದ.ಕ ಜಿಲ್ಲೆಯಾದ್ಯಂತ ಶಾಲೆ , ಪಿಯುಸಿಗೆ ರಜೆ

 






ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ  ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ,  ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)  ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


ದುರ್ಬಲ ,  ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.


Ads on article

Advertise in articles 1

advertising articles 2

Advertise under the article