ಮಂಗಳೂರು: ದ.ಕ.ಜಿಲ್ಲೆಯ 5ತಾಲೂಕುಗಳ ಶಾಲೆ, ಪಿಯುಸಿಗಳಿಗೆ ನಾಳೆಯೂ ರಜೆ
Thursday, July 18, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆಯನ್ನು ಘೋಷಿಸಿದ್ದಾರೆ.
ಆದರೆ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿಲ್ಲ. ಆದ್ದರಿ ಇಲ್ಲಿನ ಶಾಲಾ ಕಾಲೇಜುಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದೆ ಎಂದು ಡಿಸಿಯವರು ಸ್ಪಷ್ಟವಾಗಿ ತಿಳಿಸಿದ್ದಾರೆ.