-->
ಖ್ಯಾತ ನಿರೂಪಕಿ ಅಪರ್ಣಾ ನಿಧನ

ಖ್ಯಾತ ನಿರೂಪಕಿ ಅಪರ್ಣಾ ನಿಧನ



ಬೆಂಗಳೂರು: ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ(51) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.


ಅನಾರೋಗ್ಯದಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿ ಮೂಲದವರಾಗಿರುವ ಅವರು ದೂರದರ್ಶನದಲ್ಲಿ ನಿರೂಪಕಿಯಾಗಿ, ರೇಡಿಯೋ ಜಾಕಿಯಾಗಿ  ಜನಪ್ರಿಯರಾಗಿದ್ದರು. 

ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ 58 ವರ್ಷ ವಯಸ್ಸಾಗಿತ್ತು.

1990 ರ ದಶಕದಲ್ಲಿ ದೂರದರ್ಶನದಲ್ಲಿ ದಲ್ಲಿ ಪ್ರಸಾರವಾದ ವಿವಿಧ ಕಾರ್ಯಕ್ರಮಗಳ ನಿರೂಪಕಿಯಾಗಿ ಕೆಲಸ ಮಾಡಿದ್ದರು . 1984 ರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಕೊನೆಯ ಚಿತ್ರ ಮಸಣದ ಹೂವು ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. 2015 ಮತ್ತು 2021 ರ ನಡುವೆ ಕಾಮಿಡಿ ಶೋ, ಮಜಾ ಟಾಕೀಸ್‌ನಲ್ಲಿ ವರಲಕ್ಷ್ಮಿ ಪಾತ್ರವನ್ನು ನಿರ್ವಹಿಸಿಯೂ ಜನಪ್ರಿಯರಾಗಿದ್ದರು.


ಅಪರ್ಣಾ ಅವರು ಮೂಡಲ ಮನೆ ಮತ್ತು ಮುಕ್ತ ಮೊದಲಾದ ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಯಾಗಿ ಕೆಲಸ ಮಾಡಿದ್ದಾರೆ . 2013 ರಲ್ಲಿ, ಅವರು ಈಟಿವಿ ಕನ್ನಡದಲ್ಲಿ ಪ್ರಸಾರವಾದ ಕನ್ನಡ ರಿಯಾಲಿಟಿ ಟೆಲಿವಿಷನ್ ಶೋ ಬಿಗ್ ಬಾಸ್‌ನ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.


ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.


ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/fZs9L6m42Q

Ads on article

Advertise in articles 1

advertising articles 2

Advertise under the article