BANTWAL: ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿದ ವಿವಾಹಿತ!
Thursday, July 25, 2024
ಬಂಟ್ವಾಳ: ವಿವಾಹಿತನೋರ್ವ ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಮ್ಮಾಡಿ ಗ್ರಾಮ ನಿವಾಸಿ ಗುರುಪ್ರಸಾದ್ ಪ್ರಕರಣ ಆರೋಪಿ ಯಾಗಿದ್ದು, ಆತ ಒಂದು ವರ್ಷದಿಂದ ಎರಡು ಬಾರಿ ಯುವತಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.