ಮಾರಿಪಳ್ಳ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತ್ಯು
Monday, July 8, 2024
ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿರುವ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.
ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟ ಯುವಕ.
ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ನಯನ್ ಕುಮಾರ್ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.