-->
ಮಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ - ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್‌

ಮಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ - ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್‌

ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ. ಅಲ್ಲದೆ ರಾಹುಲ್ ಗಾಂಧಿಯವರು ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲವೆಂದು ಎಂದು ಏಕವಚನದಲ್ಲಿ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಸ್ಥಳೀಯ ಕಾರ್ಪೋರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನಡಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಬಿಎನ್ಎಸ್ 353(3), 353 ಸೆಕ್ಷನ್‌ನಡಿ ಪ್ರಕರಣ ದಾಖಲಿಸಿದ್ದೇವೆ. ಮುಂದಿನ ಕ್ರಮ ಆಗಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದರು.

Ads on article

Advertise in articles 1

advertising articles 2

Advertise under the article