ಸುಳ್ಯ: ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ
Wednesday, July 31, 2024
ಸುಳ್ಯ: ಇಲ್ಲಿನ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬುಧವಾರ ನಡೆದಿದೆ.
ಸುಳ್ಯ - ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತು. ಬಳಿಕ ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿತು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.