-->
ಮಂಗಳೂರು: ಭಾರೀ ಮಳೆ ಹಿನ್ನೆಲೆ ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.15ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ,  ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜು ಮುಖ್ಯಸ್ಥರುಗಳು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.

Ads on article

Advertise in articles 1

advertising articles 2

Advertise under the article