ಸೂರಜ್ ರೇವಣ್ಣನಿಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ
Monday, July 22, 2024
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಎಂಎಲ್‌ಸಿ ಸೂರಜ್ ರೇವಣ್ಣನಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
ಜಾಮೀನು ಕೋರಿ ಸೂರಜ್ ರೇವಣ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಿಚಾರಣೆ ನಡೆಸಿ, ಆದೇಶಿಸಿದ್ದಾರೆ.
*ಸೂರಜ್ ರೇವಣ್ಣನಿಗೆ ವಿಧಿಸಿರುವ ಷರತ್ತುಗಳು :*
• ನ್ಯಾಯಾಲಯದಿಂದ ಲಿಖಿತ ಅನುಮತಿ ಪಡೆದಿರಬೇಕು.
• ಅರ್ಜಿದಾರರು ಯಾವುದೇ ರೀತಿಯಲ್ಲಿ ಸಂತ್ರಸ್ತನನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಅರ್ಜಿದಾರರು ತನಿಖಾಧಿಕಾರಿ ಮುಂದೆ ಹಾಜರಾಗಬೇಕು.
• ತಿಂಗಳ ಪ್ರತಿ 2ನೇ ರವಿವಾರ ಮತ್ತು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಹಾಜರಾತಿ ಹಾಕುವುದು.
• 6 ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್ ಸಲ್ಲಿಸುವವರೆಗೆ (ಯಾವುದು ಮೊದಲು) ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು ಎಂದು ಷರತ್ತುಗಳನ್ನು ವಿಧಿಸಿದೆ.