ಬೆಂಗಳೂರು: ಮತ್ತೊಬ್ಬಳೊಂದಿಗೆ ಪತಿಗೆ ಅಕ್ರಮ ಸಂಬಂಧ - ಲೈವ್ ವೀಡಿಯೋ ಮಾಡಿ ಪತ್ನಿ ನೇಣಿಗೆ ಶರಣು
Monday, July 29, 2024
ಬೆಂಗಳೂರು: ಮತ್ತೊಬ್ಬಳೊಂದಿಗೆ ಪತಿ ಅಕ್ರಮ ಸಂಬಂಧ ಹೊಂದಿದ್ದರಿಂದ ಬೇಸತ್ತ ಪತ್ನಿ ಲೈವ್ ವಿಡಿಯೊ ಮಾಡಿ ಫ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ.
ಅಂದ್ರಹಳ್ಳಿ ನಿವಾಸಿ ಮಾನಸ(25)ಆತ್ಮಹತ್ಯೆ ಮಾಡಿಕೊಂಡು ಮಹಿಳೆ.
6 ವರ್ಷಗಳ ಹಿಂದೆ ಮಾನಸಳಿಗೆ ದಿಲೀಪ್ ಎಂಬಾತನೊಂದಿಗೆ ವಿವಾಹವಾಗಿತ್ತು. ಈ ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗುವಿದೆ. ಕಳೆದ ಒಂದೂವರೆ ವರ್ಷದಿಂದ ದಿಲೀಪ್ ಬೇರೊಬ್ಬಳ ಸಹವಾಸ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ - ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಸಂಜೆ ಮಾನಸ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಮಾನಸ ಕುಟುಂಬಸ್ಥರು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಪತಿಯ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.