ಮಂಗಳೂರು: ಚಡ್ಡಿಗ್ಯಾಂಗ್‌ನಿಂದ ಮತ್ತೊಂದು ಕಳವು ಕೃತ್ಯದ ಶಂಕೆ? - ಮನೆಮಂದಿ ಇದ್ದಾಗಲೇ ಚಿನ್ನಾಭರಣ, ವಾಹನ ಕದ್ದೊಯ್ದ ಕಳ್ಳರು
Tuesday, July 9, 2024
ಮಂಗಳೂರು: ನಗರದ ಉರ್ವ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿನ ಮನೆಯೊಂದಕ್ಕೆ ಸೋಮವಾರ ರಾತ್ರಿ ನುಗ್ಗಿದ ಕಳ್ಳರು ವಾಹನ, ಚಿನ್ನಾಭರಣವನ್ನು ಕದ್ದೊಯ್ದ ಘಟನೆ ನಡೆದಿದೆ. ಇದು ನಗರದಲ್ಲಿ ನಡೆದ ಚಡ್ಡಿಗ್ಯಾಂಗ್‌ನ ಮತ್ತೊಂದು ಕೃತ್ಯವೆಂಬ ಶಂಕೆ ವ್ಯಕ್ತವಾಗಿದೆ.
ಮನೆಮಂದಿ ಮನೆಯೊಳಗಡೆ ಮಲಗಿದ್ದಾಗಲೇ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ.
ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಮನೆಯೊಂದರ ಕಿಟಕಿ ಮುರಿದು ಕಳವು ಕೃತ್ಯ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.