ಮೂಡುಬಿದಿರೆ: ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟ - ಆಳ್ವಾಸ್‌ನ 100 ವಿದ್ಯಾರ್ಥಿಗಳು ಉತ್ತೀರ್ಣ
Thursday, August 1, 2024
ಮೂಡುಬಿದಿರೆ: 2024-25ನೇ ಸಾಲಿನ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಶೇ.14.96 ಫಲಿತಾಂಶ ದಾಖಲಾಗಿದೆ. ಸಿಎ ಪರೀಕ್ಷೆ ಬರೆಯಲು ಆಳ್ವಾಸ್ ಕಾಲೇಜಿನ 147 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 100 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.68.03 ಫಲಿತಾಂಶ ದಾಖಲಿಸಿದೆ.
ಪ್ರಸಕ್ತ ವರ್ಷದಲ್ಲಿ ಆಳ್ವಾಸ್‌ನ 42 ವಿದ್ಯಾರ್ಥಿಗಳು ಸಿಎ ಫೈನಲ್‌ನಲ್ಲಿ, 30 ವಿದ್ಯಾರ್ಥಿಗಳು ಸಿಎ ಇಂಟರ್ ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಿಎಯ ಪ್ರತಿ ಹಂತದಲ್ಲೂ ಉತ್ತಮ ಫಲಿತಾಂಶ ಪ್ರಕಟವಾಗಿದೆ.
ಪದವಿಪೂರ್ವ ಕಾಲೇಜಿನ ಜನ ಪ್ರಾಚಾರ್ಯ ಪ್ರೊ. ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆ.ಜಿ ಪತ್ರಿಕಾಗೋಷ್ಠಿಯಲ್ಲಿದ್ದರು.