ಮಂಗಳೂರು: ಪುಟ್ಬಾಲ್ ಆಟದಲ್ಲಿ ವಿದ್ಯಾರ್ಥಿಗಳ ನಡುವೆ ಕಿರಿಕ್ - ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ
Tuesday, August 20, 2024
ಮಂಗಳೂರು: ಎರಡು ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಫುಟ್ಬಾಲ್ ಆಟದಲ್ಲಿ ನಡೆದ ಕಿರಿಕ್ ಮತ್ತೂ ಮುಂದುವರೆದು ಒಂದು ತಂಡ ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆಗೈದಿರುವ ಘಟನೆ ನಡೆದಿದೆ. ಸದ್ಯ ಹಲ್ಲೆಯ ವೀಡಿಯೋ ವೈರಲ್ ಆಗಿದೆ.
ಈ ಗಲಾಟೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬವರು ಹಲ್ಲೆಗೊಳಗಾದ ವಿದ್ಯಾರ್ಥಿಗಳು. ದಿಯಾನ್, ತಸ್ಲಿಮ್, ಸಲ್ಮಾನ್ ಸೇರಿದಂತೆ ಇಬ್ಬರು ಅಪ್ರಾಪ್ತರು ಹಲ್ಲೆಗೈದಿರುವ ಆರೋಪಿಗಳು.
ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಮಂಗಳೂರಿನ ನೆಹರೂ ಮೈದಾನದಲ್ಲಿ ಫುಟ್ಬಾಲ್ ಪಂದ್ಯಾಟ ನಡೆದಿದೆ. ಈ ಪಂದ್ಯದಲ್ಲಿ ಯೆನಪೊಯ ಕಾಲೇಜು ವಿದ್ಯಾರ್ಥಿಗಳ ತಂಡ ಜಯ ಗಳಿಸಿತ್ತು. ಈ ವಿವಾದವೇ ಈ ಹಲ್ಲೆಗೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಆರೋಪಿಗಳು, ಈ ವಿದ್ಯಾರ್ಥಿಗಳನ್ನು ಕಾರಿನಲ್ಲಿ ಜಪ್ಪು ಮಹಾಕಾಳಿ ಪಡ್ಪು ಮತ್ತು ಮಹಾಕಾಳಿ ಪಡ್ಪು ಮಸೀದಿ ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕಾರಿನಲ್ಲಿ ಕರೆದೊಯ್ದಿದ್ದಾರೆ. ಕೈ ಮತ್ತು ಕಾಲಿನಿಂದ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲಿ ಯದ್ವಾತದ್ವಾ ಹೊಡೆದು ಸಿಗರೇಟ್‌ನಿಂದ ಸುಟ್ಟು ಹಲ್ಲೆ ಮಾಡಲಾಗಿದೆ. ಅರೆಬೆತ್ತಲು ಮಾಡಿ ಬಸ್ಕಿ ಹೊಡೆದು, ಕ್ಷಮೆ ಕೇಳುವಂತೆ ಹಲ್ಲೆ ಮಾಡಿರುವ ವೀಡಿಯೋ ವೈರಲ್ ಆಗಿದೆ. ಸದ್ಯ ವಿಡಿಯೋ ವೈರಲ್ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಕೈಗೆತ್ತಿಕೊಂಡು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಸಂತ್ರಸ್ತರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸಂತ್ರಸ್ತರು ನೀಡಿರುವ ದೂರಿನನ್ವಯ 162/2024 U/s - 109, 115(2), 118(1), 127(2), 137(2), 189(2), 190, 191 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. (1), 191(3), 351(2), 352 ಆಫ್ BNS, 2023 ಸೆಕ್ಷನ್ ನಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ದಿಯಾನ್ ಹಾಗೂ ಸಲ್ಮಾನ್ ಎಂಬವರನ್ನು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ.