ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ : JOB
Sunday, August 4, 2024
ಮಂಗಳೂರು: ಬೆಳ್ತಂಗಡಿ ತಾಲೂಕು ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಜಿಲ್ಲಾಧಿಕಾರಿ ಕಚೇರಿ ಕಾನೂನು ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ ಹಾಗೂ ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ವಿಶೇಷ ಅರ್ಹತೆ ಇದ್ದಲ್ಲಿ ಈ ಬಗ್ಗೆ ದಾಖಲೆಗಳನ್ನು ಲಗತ್ತಿಸಿರಬೇಕು. ಅರ್ಜಿ ಸ್ವೀಕರಿಸಲು ಆಗಸ್ಟ್ 12 ಕೊನೆಯ ದಿನ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.