ಕೆಇಎ: ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Sunday, August 4, 2024
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ನಡೆಸಲು ಉದ್ದೇಶಿಸಿರುವ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿ ಪ್ರಕಟನೆಗೊಂಡಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆ. 11ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಬಿಎಂಟಿಸಿ (ಹೈದರಾಬಾದ್ ಕರ್ನಾಟಕ ಹೊರತಾದ) ಪರೀಕ್ಷೆ ಸೆ.1ರಂದು, ಪಿಎಸ್‌ಐ ಪರೀಕ್ಷೆ ಸೆ.22ರಂದು, ಜಿಟಿಟಿಸಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ.29ರಂದು, ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಸಲಾಗುವುದು ಎಂದು ಕೆಇಎ ಹೇಳಿದೆ.