-->
ಆಳ್ವಾಸ್ ವಿರಾಸತ್–2024- ದಿನಾಂಕ ಘೋಷಣೆ- ಈ ಬಾರಿ 6 ದಿನಗಳ ಕಾರ್ಯಕ್ರಮ

ಆಳ್ವಾಸ್ ವಿರಾಸತ್–2024- ದಿನಾಂಕ ಘೋಷಣೆ- ಈ ಬಾರಿ 6 ದಿನಗಳ ಕಾರ್ಯಕ್ರಮ

ಡಿಸೆಂಬರ್ 10ರಿಂದ 15ರವರೆಗೆ 6 ದಿನಗಳ 30ನೇ ವರ್ಷದ ಆಳ್ವಾಸ್ ವಿರಾಸತ್–2024- ಸಾರ್ವಜನಿಕರಿಗೆ ಸಂಪೂರ್ಣ ಉಚಿತ





 

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ‘ಆಳ್ವಾಸ್ ವಿರಾಸತ್-2024’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್-2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ. 

ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ 15.12.2024ನೇ ಭಾನುವಾರವನ್ನು ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ವು ನಡೆಸುವ ಆಳ್ವಾಸ್ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್-2024’ ಗೆ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.


Ads on article

Advertise in articles 1

advertising articles 2

Advertise under the article