-->
ಮಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ - ಅರುಣ್ ಕುಮಾರ್ ಪುತ್ತಿಲ ಮೇಲೆ ಪ್ರಕರಣ ದಾಖಲು

ಮಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ - ಅರುಣ್ ಕುಮಾರ್ ಪುತ್ತಿಲ ಮೇಲೆ ಪ್ರಕರಣ ದಾಖಲು


ಮಂಗಳೂರು: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

2023ರ ಜೂನ್‌ನಲ್ಲಿ ಅರುಣ್ ಕುಮಾರ್ ಪುತ್ತಿಲ ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು 47ವರ್ಷದ ಮಹಿಳೆಯೊಬ್ಬರು ರವಿವಾರ ದೂರು ನೀಡಿದ್ದಾರೆ‌. ಅಲ್ಲದೆ ದೌರ್ಜನ್ಯ ಎಸಗಿರುವ ಸಂದರ್ಭದ ಫೋಟೊ, ಸೆಲ್ಫಿ, ವಿಡಿಯೋ ಇಟ್ಟುಕೊಂಡು ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು‌. ಆದರೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ನೀಡಿದ್ದರು. ಬಿಜೆಪಿಗೆ ಠಕ್ಕರ್ ಕೊಟ್ಟು ಬಂಡಾಯ ಸ್ಪರ್ಧಿಸಿ ಪ್ರಖ್ಯಾತಿಯನ್ನು ಪಡೆದಿದ್ದರು‌. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಫಿದಾ ಆಗಿದ್ದ ಮಹಿಳೆ ಅವರ ಅಭಿಮಾನಿಯಾಗಿದ್ದರು‌. ಸಾಮಾಜಿಕ ಜಾಲತಾಣದಲ್ಲಿ ಪುತ್ತಿಲ ಅವರನ್ನು ಫಾಲೋ ಮಾಡುತ್ತಿದ್ದುದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Related Posts

Ads on article

Advertise in articles 1

advertising articles 2

Advertise under the article