-->
ಐದು ವರ್ಷಗಳಿಂದ ವ್ಯಕ್ತಿಯ ಹೊಟ್ಟೆಯಲ್ಲಿದ್ದ 2ಸೆಂ.ಮೀ. ಉದ್ದದ ಮೀನಿನ ಮೂಳೆಯನ್ನು ಹೊರತೆಗೆದ ವೈದ್ಯರು

ಐದು ವರ್ಷಗಳಿಂದ ವ್ಯಕ್ತಿಯ ಹೊಟ್ಟೆಯಲ್ಲಿದ್ದ 2ಸೆಂ.ಮೀ. ಉದ್ದದ ಮೀನಿನ ಮೂಳೆಯನ್ನು ಹೊರತೆಗೆದ ವೈದ್ಯರು



ಬೆಂಗಳೂರು: ಕಳೆದ 5ವರ್ಷಗಳಿಂದ ಪದೇಪದೇ ಹೊಟ್ಟೆನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ.ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ಕಳೆದ ಐದು ವರ್ಷಗಳ ಹಿಂದೆ ಮೀನು ಸೇವಿಸಿದ್ದಾರೆ. ಈ ವೇಳೆ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಬಳಿಕ ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದಾರೆ. ಆದರೆ ಮತ್ತೊಂದು ಮೂಳೆ ಹೊಟ್ಟೆಯಲ್ಲಿ ಬಾಕಿಯಾದದ್ದು ವೈದ್ಯರಿಗೆ ಪತ್ತೆಯಾಗಿರಲ್ಲ. ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿದೆ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸಿದ್ದಾರೆ. 


ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ. ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. 


ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವಿವರಣೆ ನೀಡಿದರು.


Ads on article

Advertise in articles 1

advertising articles 2

Advertise under the article