-->
ಸುರತ್ಕಲ್: "ಬಾ ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ" ಎಂದು ಮೊಬೈಲ್‌ಗೆ ಮೆಸೇಜ್ - ಯುವಕ ವಶಕ್ಕೆ

ಸುರತ್ಕಲ್: "ಬಾ ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ" ಎಂದು ಮೊಬೈಲ್‌ಗೆ ಮೆಸೇಜ್ - ಯುವಕ ವಶಕ್ಕೆ



ಸುರತ್ಕಲ್: "ಬಾ ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ" ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ಮೊಬೈಲ್‌ಗೆ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಈ ರೀತಿ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಈತ ಯುವತಿಯ ಸಹೋದರನಿಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿಯ ಕುಟುಂಬ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article