ಭಾರತದ ಮಹಾ ಉದ್ಯಮಿ, ಬಡವರ ಬಂಧು ರತನ್ ಟಾಟಾ ಇನ್ನಿಲ್ಲ!
Thursday, October 10, 2024
ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ಕೊನೆಯುಸಿರೆಳೆದಿದ್ದಾರೆ. 86 ವಯಸ್ಸಿನ ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಬಡವರಿಗೆ ಕೋಟ್ಯಂತರ ರೂಪಾಯಿ ದಾನ ಮಾಡುವ ಮೂಲಕ ಕಲಿಯುಗದ ಕರ್ಣ ಎನಿಸಿಕೊಂಡಿದ್ದ ಇವರು, ತಮ್ಮ ವೃದ್ಧಾಪ್ಯದಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದ ಇಂದು ನಮ್ಮನೆಲ್ಲ ಬಿಟ್ಟು ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ.
86 ವರ್ಷದ ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೊನ್ನೆಯಷ್ಟೇ ರಕ್ತದೊತ್ತಡ ಹೆಚ್ಚಾಗಿ ಮುಂಬೈನ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ.