ಸಿ ಪಿ ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆ ಫೈನಲ್
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಕ್ಷೇತ್ರದ ಕೇಂದ್ರ ಬಿಂದು ಸಿ ಪಿ ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಅಂತಿಮವಾಗಿದೆ.
ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.
ಸಿ ಪಿ ಯೋಗೀಶ್ವರ್ ಬಿಜೆಪಿ ಅಭ್ಯರ್ಥಿಯಾಗಲು ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ ಮೈತ್ರಿಯ ಕಾರಣಕ್ಕಾಗಿ ಬಿಜೆಪಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು. ಇದು ಯೋಗೀಶ್ವರ್ ಅಸಮಧಾನಕ್ಕೆ ಕಾರಣವಾಗಿತ್ತು. ಯೋಗೀಶ್ವರ್ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಯೋಗೀಶ್ವರ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿರುವುದರಿಂದ ಕಾಂಗ್ರೆಸ್ ಸೇರ್ಪಡೆಯಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಅಂತಿಮವಾಗಿದೆ.