-->
ಡಿಎಂಕೆ ಸರಕಾರದ ವಿರುದ್ಧ ಅಣ್ಣಾಮಲೈ ಭೀಷ್ಮ ಪ್ರತಿಜ್ಞೆ: ಚಾಟಿಯಿಂದ ಹೊಡೆದುಕೊಂಡು ಪ್ರತಿಭಟನೆ ನಡೆಸಿದ್ದೇಕೆ ಗೊತ್ತಾ?

ಡಿಎಂಕೆ ಸರಕಾರದ ವಿರುದ್ಧ ಅಣ್ಣಾಮಲೈ ಭೀಷ್ಮ ಪ್ರತಿಜ್ಞೆ: ಚಾಟಿಯಿಂದ ಹೊಡೆದುಕೊಂಡು ಪ್ರತಿಭಟನೆ ನಡೆಸಿದ್ದೇಕೆ ಗೊತ್ತಾ?




ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಡಿಎಂಕೆಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಕಾಲಿಗೆ ಚಪ್ಪಲಿ ಅಥವಾ ಶೂ ಧರಿಸುವುದಿಲ್ಲ ಎಂದು 'ಭೀಷ್ಮ ಪ್ರತಿಜ್ಞೆ' ಸ್ವೀಕರಿಸಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಣ್ಣಾಮಲೈ ಕೊಯಮತ್ತೂರಿನಲ್ಲಿರುವ ತಮ್ಮ ಸ್ವಗೃಹದ ಮುಂದೆ ಆರು ಚಾಟಿ ಏಟುಗಳನ್ನು ಹೊಡೆದುಕೊಳ್ಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?", "ಆರೋಪಿ ಜ್ಞಾನಶೇಖರನ್ ಅವರನ್ನು ಗಲ್ಲಿಗೇರಿಸಿ" "#ShameOn YouStalin" ಎಂಬ ಘೋಷಣಾ ಫಲಕಗಳನ್ನು ಬಿಜೆಪಿ ಬೆಂಬಲಿಗರು ಹಿಡಿದುಕೊಂಡಿದ್ದರು.

ಇಂಜಿನಿಯರಿಂಗ್ ವಿದ್ಯಾರ್ಥಿನಿಯ ವಿವರಗಳನ್ನು ಒಳಗೊಂಡ ಎಫ್‌ಐಆ‌ರ್ ಸೋರಿಕೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರ ಮೇಲೆ ವಾಗ್ದಾಳಿ ನಡೆಸಿದ ಅಣ್ಣಾಮಲೈ, ಸಂತ್ರಸ್ತೆಯನ್ನು ಹೆದರಿಸಲು ಎಫ್‌ಐಆರ್ ಹಾಕಲಾಗಿದೆ ಎಂದು ಪೊಲೀಸರು ನಿರಾಕರಿಸಿದ್ದಾರೆ. ಡಿಎಂಕೆ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇನ್ನು ಮುಂದೆ ನಿತ್ಯ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು. ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಪೊಲೀಸರನ್ನು ಬಳಸುತ್ತಿರುವುದರಿಂದ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಘಟನೆ ನಡೆದ ದಿನವೇ ಅಣ್ಣಾಮಲೈ ಹೇಳಿದ್ದರು.

ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಡಿಸೆಂಬರ್ 24ರಂದು ಬೆಳಕಿಗೆ ಬಂದಿದೆ. ಡಿಸೆಂಬರ್ 23 ರಂದು ಸಂಜೆ ಕ್ಯಾಂಪಸ್ ಆವರಣದೊಳಗೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಕ್ಯಾಂಪಸ್‌ನಲ್ಲಿ ತನ್ನ ಸ್ನೇಹಿತನೊಂದಿಗೆ ಓಪನ್ ಏರಿಯಾದಲ್ಲಿ ಕುಳಿತಿದ್ದಳು. ಅಲ್ಲಿಗೆ ಬಂದ ಅಪರಿಚಿತಬ್ಬರು ಆಕೆಯ ಸ್ನೇಹಿತನನ್ನು ಥಳಿಸಿ ಬಳಿಕ ಯುವತಿಯನ್ನು ಪೊದೆಯೊಳಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ವರದಿಯಾಗಿದೆ. ತನಿಖೆಯ ಬಳಿಕ ಪೊಲೀಸರು ಜ್ಞಾನಶೇಖರನ್ ಎಂಬ 37 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಶಂಕಿತ ಆರೋಪಿ ತಾನು ಯುವತಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈತ ರಸ್ತೆ ಬದಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಘಟನೆಯಲ್ಲಿ ಬಂಧಿತನಾಗಿರುವ ಆರೋಪಿಯ ಮಾಹಿತಿಯನ್ನು ವಿವರಿಸಿದ್ದಾರೆ. ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಜ್ಞಾನಶೇಖರನ್ ಈ ಹಿಂದೆಯೂ ಅಪರಾಧ ಎಸಗಿದ್ದಾನೆ.ಆತನ ವಿರುದ್ಧ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಉಲ್ಲೇಖಿಸಿದ್ದಾರೆ. ಆತನ ಫೋಟೋ ಸಾರ್ವಜನಿಕವಾದ ಬಳಿಕ ಡಿಎಂಕೆ ಪದಾಧಿಕಾರಿ (ಡಿಎಂಕೆ ವಿದ್ಯಾರ್ಥಿ ವಿಭಾಗದ ಉಪ ಸಂಘಟನಾ ಕಾರ್ಯದರ್ಶಿ) ಎಂದು ತಿಳಿದುಬಂದಿದೆ. ಡಿಎಂಕೆ ನಾಯಕರ ಜತೆ ಇದ್ದ ಕಾರಣ ಪೊಲೀಸರು ಆತನ ವಿರುದ್ಧ ರೌಡಿ ಶೀಟ್ ತೆರೆಯಲಿಲ್ಲ ಎಂದು ಟೀಕಿಸಿದ್ದಾರೆ.

Ads on article

Advertise in articles 1

advertising articles 2

Advertise under the article