-->
 ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರ ನೇಮಕಕ್ಕೆ ಆಕ್ಷೇಪ: ಏಕಪಕ್ಷೀಯ ನಿರ್ಧಾರ ಎಂದ ವಿಪಕ್ಷ ನಾಯಕರು!

ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರ ನೇಮಕಕ್ಕೆ ಆಕ್ಷೇಪ: ಏಕಪಕ್ಷೀಯ ನಿರ್ಧಾರ ಎಂದ ವಿಪಕ್ಷ ನಾಯಕರು!

 ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರ ನೇಮಕಕ್ಕೆ ಆಕ್ಷೇಪ: ಏಕಪಕ್ಷೀಯ ನಿರ್ಧಾರ ಎಂದ ವಿಪಕ್ಷ ನಾಯಕರು!




ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಪ್ರಕ್ರಿಯೆಯು ದೋಷಪೂರಿತವಾಗಿದೆ ಮತ್ತು ಪೂರ್ವ ನಿರ್ಧರಿತ ಕಸರತ್ತಾಗಿದೆ ಎಂದು ವಿಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈ ನೇಮಕಾತಿಗೆ ತಮ್ಮ ಆಕ್ಷೇಪ ವ್ಯಕ್ತಪಡಿಸಿ ಹೇಳಿಕೆಯನ್ನು ಹೊರಡಿಸಿದ್ದಾರೆ.


ಡಿಸೆಂಬರ್ 18ರಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ನೇಮಕಾತಿ ಬಗ್ಗೆ ಚರ್ಚೆ ನಡೆಸಲಾಗಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಈ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದರು.


ಸಭೆಯ ತೀರ್ಮಾನದ ಬಗ್ಗೆ ಉಭಯ ನಾಯಕರು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಮತ್ತು ಅಧ್ಯಕ್ಷ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿಗಳಾದ ರೋಹಿಂಗ್ಟನ್ ಫಾಲಿ ನಾರಿಮನ್ ಹಾಗೂ ಕೆ.ಎಂ. ಜೋಸೆಫ್ ಅವರ ಹೆಸರನ್ನು ವಿಪಕ್ಷ ನಾಯಕರು ಸೂಚಿಸಿದ್ದರು.


ಸದಸ್ಯರ ಸ್ಥಾನಗಳಿಗೆ ಎಸ್. ಮುರಳಿಧರ್, ಅಖಿಲ್ ಖುರೇಶಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು ಕೇಂದ್ರ ಸರಕಾರವು ನಮ್ಮ ಅಭಿಪ್ರಾಯಗಳನ್ನು ಕಡೆಗಣಿಸಿ ಏಕ ಪಕ್ಷಿಯ ತೀರ್ಮಾನ ತೆಗೆದುಕೊಂಡಿದೆ ಇದು ಖಂಡನೀಯ ಎಂದು ವಿಪಕ್ಷ ನಾಯಕರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಆಯೋಗದ ನೂತನ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ವಿ ರಾಮ ಸುಬ್ರಮಣಿ ಎನ್ ಅವರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಇಬ್ಬರು ಸದಸ್ಯರನ್ನು ನೇಮಿಸಲಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷರಾಗಿದ್ದ ಅರುಣ್ ಕುಮಾರ್ ಮಿಶ್ರ ಅವರ ಅಧಿಕಾರ ಅವಧಿ ಜೂನ್ 1ರಂದು ಕೊನೆಗೊಂಡಿತ್ತು.



Ads on article

Advertise in articles 1

advertising articles 2

Advertise under the article