ಬೆಳ್ತಂಗಡಿ: ನಾಪತ್ತೆಯಾಗಿದ್ದ ಅನ್ಯಕೋಮಿನ ಯುವತಿ ಹಿಂದೂ ಯುವಕನನ್ನು ಮದುವೆಯಾಗಿ ಪತ್ತೆ
Friday, January 10, 2025
ಬೆಳ್ತಂಗಡಿ: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ನಡೆದಿದೆ.
ಹರೀಶ್ ಗೌಡ (24) ಮತ್ತು ಸುಹಾನ (19) ಪ್ರೀತಿಸಿ ಮದುವೆಯಾದ ಜೋಡಿ.
ಹರೀಶ್ ಗೌಡ ಹಾಗೂ ಸುಹಾನ ಇಬ್ಬರೂ ಫೇಸ್‌ಬುಕ್‌ನಲ್ಲಿ ಪರಿಚಿತರಾಗಿದ್ದರು. ಬಳಿಕ ಪರಸ್ಪರ ಪ್ರೀತಿಸಲಾರಂಭಿಸಿದ್ದರು. ಇತ್ತೀಚೆಗೆ ಕಂಪ್ಯೂಟರ್ ಕ್ಲಾಸ್‌ಗೆ ಹೋಗಿದ್ದ ಸುಹಾನ ನಾಪತ್ತೆಯಾಗಿದ್ದಳು. ಆದ್ದರಿಂದ ಆಕೆಯ ಮನೆಯವರು ಮೂಡುಬಿದಿರೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಇದೀಗ ಇಬ್ಬರೂ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿ ಪತ್ತೆಯಾಗಿದ್ದಾರೆ. ಮದುವೆಯಾದ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿದೆ. ಪೊಲೀಸ್ ಮುಂದೆ ಯುವತಿ ತಾನು ಸ್ವಇಚ್ಛೆಯಿಂದ ಮದುವೆ ಆಗಿರುವುದಾಗಿ ಹೇಳಿಕೆ ನೀಡಿದ್ದಾಳೆ.