ಬೋರ್ಡ್ ಕಾಲೇಜು ರಂಗ ಮಂಟಪದ ಶಿಲಾನ್ಯಾಸ
Saturday, February 8, 2025
ಕಾರ್ಕಳ: ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ, ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ಅವರಿಂದ 11 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪದ ಶಿಲಾನ್ಯಾಸ ಕಾರ್ಯಕ್ರಮ ಫೆ. 7ರಂದು ಜರುಗಿತು. ಕಮಲಾಕ್ಷ ಕಾಮತ್ ಶಿಲಾನ್ಯಾಸ ನೇರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜನಾರ್ಧನ್ ಇಡ್ಯ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀನಿವಾಸ್ ಕಾರ್ಲ, ನಿರಂಜನ್ ಜೈನ್, ಪ್ರೋ. ವರ್ಮ ಅಜಿ ಎಂ., ಅರುಣ್ ಪುರಾಣಿಕ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದಿನೇಶ್ ಹೆಗ್ಡೆ ಬಿಳಿರಾಯ ಇಂಜಿನಿಯರ್, ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಮಲ್ಲಿಕಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲೆ ಫ್ಯಾನಿ ಜೋಯ್ಸ್ ಸ್ವಾಗತಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಕೋಶಾಧಿಕಾರಿ ನಿತ್ಯಾನಂದ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಭೌತಶಾಸ್ತ್ರ ಉಪನ್ಯಾಸಕ ಸದಾನಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.