ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ- ಮೂವರು ಕಾಮುಕರು ಅರೆಸ್ಟ್
Saturday, February 22, 2025
ಬೆಂಗಳೂರು : ಮಹಿಳೆಯೊಬ್ಬರ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಮೂವರನ್ನು ಬೆಂಗಳೂರಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಉತ್ತರಪ್ರದೇಶ ಮೂಲದ ಅಜಿತ್, ವಿಶ್ವಾಸ್, ಶಿವು ಎಂಬುವರನ್ನು ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಓರ್ವ ಆರೋಪಿಗಾಗಿ ಪತ್ತೆ ಕಾರ್ಯ ಮುಂದುವರೆದಿದೆ.
ಫೆ.20ರಂದು ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಮಹಿಳೆಯನ್ನು ನಾಲ್ವರು ಭೇಟಿ ಮಾಡಿದ್ದು, ನಂತರ ಹಳೆ ಪರಿಚಯಸ್ಥರ ರೀತಿ ಮಾತನಾಡಿ ಹೋಟೆಲ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ 122 ಕರೆ ಮಾಡಿದ ಮಹಿಳೆ ಮಾಹಿತಿ ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಂತ್ರಸ್ತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.