ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಕಾರ್ಕಳ: ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಸಾಣೂರು ನರಸಿಂಹ ಕಾಮತ್ ಮತ್ತು ನೂತನ ಉಪಾಧ್ಯಕ್ಷರಾಗಿ ಶ್ರೀ ರಾಯಲ್ ನರೋನ್ನ ಅವಿರೋಧವಾಗಿ ಸರ್ವಾನುಮತದ ಆಯ್ಕೆಯಾದರು.
ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿ ಶ್ರೀಮತಿ ಶಹನಾಜ್ ಅವರು ಸಹಕಾರಿ ಕಾಯಿದೆಗೆ ಅನುಗುಣವಾಗಿ ಚುನಾವಣೆ ನಡೆಸಿದರು. ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಸಂತೋಷ್ ಶೆಟ್ಟಿ ಹಾಲು ಪರೀಕ್ಷಕಿ ಶ್ರೀಮತಿ ಪ್ರಮೀಳಾ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ನೂತನವಾಗಿ ಈ ಬಾರಿ ಹೊಸ ನಿರ್ದೇಶಕರಾಗಿ ಆಯ್ಕೆಯಾದ ಶ್ರೀಮತಿ ಪೂರ್ಣಿಮಾ ಕಿಣಿ ಮತ್ತು ಶ್ರೀ ದಿಲೀಪ್ ಶೆಟ್ಟಿಯವರನ್ನು ಅಭಿನಂದಿಸಲಾಯಿತು.
ಕಳೆದ ಹತ್ತು ವರ್ಷಗಳಿಂದ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀಮತಿ ಯಶೋದ ಸುವರ್ಣ ರವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ನೂತನ ಅಧ್ಯಕ್ಷರಾದ ಸಾಣೂರು ನರಸಿಂಹ ಕಾಮತ್ ಮತ್ತು ನೂತನ ಉಪಾಧ್ಯಕ್ಷರಾದಂತ ಶ್ರೀ ರಾಯಲ್ ನರೋನ್ನ ರವರು ಅವಿರೋಧವಾಗಿ ಸರ್ವಾನುಮತದ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರುಗಳಿಗೆ ವೈಯಕ್ತಿಕವಾಗಿ ಕೃತಜ್ಞತೆಯನ್ನುಸಲ್ಲಿಸಿದರು.
ಸಂಘದ ಸ್ಥಾಪಕ ಅಧ್ಯಕ್ಷರಾದ ಶ್ರೀ ಕೊರಗಶೆಟ್ಟಿ, ಸ್ಥಾಪಕ ಕಾರ್ಯದರ್ಶಿ ಶ್ರೀ ಜ್ಞಾನದೇವ್, ಹಿರಿಯ ನಿರ್ದೇಶಕರಾದ ಶ್ರೀ ಸೋಮಶೇಖರ್, ಶ್ರೀ ಸೈಮನ್ ಡಿಸೋಜ, ಶ್ರೀ ಜಯಾನಂದ ಶುಭಾಶಂಸನೆಗೈದರು.
ನಿರ್ದೇಶಕರಾದ ಶ್ರೀ ಪ್ರವೀಣ ಶೆಟ್ಟಿ ಯವರು ಕಾರ್ಯಕ್ರಮ ನಿರೂಪಿಸಿ, ಶ್ರೀ ಜಯಶೆಟ್ಟಿಗಾರ್ ವಂದನಾರ್ಪಣೆಗೈದರು.