ಮಂಗಳೂರು: ಕುಕ್ಕೆ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್
Tuesday, March 11, 2025
ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು.
ಮುಖಕ್ಕೆ ಮಾಸ್ಕ್ ಧರಿಸಿ, ತಲೆಗೆ ದುಪ್ಪಟ ಹಾಕಿ ಅವರು ದೇವರ ದರ್ಶನ ಪಡೆದರು. ಮಧ್ಯಾಹ್ನದ ಪೂಜೆಯಲ್ಲಿ ಭಾಗಿಯಾದ ಅವರು ದೇವಸ್ಥಾನದಲ್ಲಿ ಅನ್ನಪ್ರಸಾದ ಸೇವಿಸಿದರು. ಬಳಿಕ ಖಾಸಗಿ ಹೋಟೆಲ್‌ಗೆ ತೆರಳಿದರು.
ಇನ್ನೆರಡು ದಿನಗಳ ಕಾಲ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯವಿರುವ ಕತ್ರಿನಾ ಕೈಫ್ ಕುಕ್ಕೆಯಲ್ಲಿ ನಡೆಯುವ ಸರ್ಪ ಸಂಸ್ಕಾರ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.