ಮಂಗಳೂರು: ನಿಯಂತ್ರಣ ತಪ್ಪಿದ ಬಸ್ ಪಲ್ಟಿ; ಓರ್ವ ಬಲಿ, 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
Friday, April 4, 2025
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಓರ್ವ ಮೃತಪಟ್ಟು, 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರಿನತ್ತ ಬಸ್ ಹೊರಡಿತ್ತು. ಬಸ್ಸು ನಸುಕಿನ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಮಂಗಳೂರಿನತ್ತ ಬರುತ್ತಿತ್ತು. ಆದರೆ ನೀರಕಟ್ಟೆಯ ಅಪಾಯಕಾರಿ ತಿರುವಿನಲ್ಲಿ ನಿಯಂತ್ರಣ ಕಳೆದು ಕೊಂಡ ಬಸ್ ಏಕಾಏಕಿ ಪಲ್ಟಿಯಾಗಿದೆ.
ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ, ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.