ಸುಳ್ಯ: ಕಾರಿನಲ್ಲಿ ಹುಚ್ಚಾಟ- ಸುಮೋಟೊ ಕೇಸ್ ದಾಖಲಾಗುತ್ತಿದ್ದಂತೆ ಫೋನ್ ಸ್ವಿಚ್ ಆಫ್ ಮಾಡಿ ಯುವಕರು ಎಸ್ಕೇಪ್
Sunday, April 6, 2025
ಸುಳ್ಯ: ಇಲ್ಲಿನ ಸಂಪಾಜೆ ಸುಳ್ಯ ರಸ್ತೆಯಲ್ಲಿ ಕಾರಿನಿಂದ ಹೊರಬಂದು ಹುಚ್ಚಾಟ ಮೆರೆದ ಪ್ರಕರಣದಲ್ಲಿ ಪೊಲೀಸರು ಸುಮೋಟೊ ಕೇಸ್ ದಾಖಲಿಸುತ್ತಿದ್ದಂತೆ ಫೋನ್ ಸ್ವಿಚ್ ಆಫ್ ಮಾಡಿ ಯುವಕರು ತಲೆಮರೆಸಿಕೊಂಡಿದ್ದಾರೆ.
ಭಟ್ಕಳ ಮೂಲದ ಯುವಕರ ತಂಡವೊಂದು ಕಾರಿನಲ್ಲಿ ಹುಚ್ಚಾಟ ಮೆರೆದಿರುವ ವೀಡಿಯೋ ವೈರಲ್ ಆಗಿತ್ತು. ವೈರಲ್ ಆದ ವೀಡಿಯೋ ಆಧಾರದಲ್ಲಿ ಕಾರು ನಂಬರ್ ಗುರುತಿಸಿ ಸುಳ್ಯ ಠಾಣೆಯಲ್ಲಿ BNS ಆಕ್ಟ್ 281 IMV ಆಕ್ಟ್ ನ 184 ಸೆಕ್ಷನ್ ಅಡಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಯುವಕರು ಎಸ್ಕೇಪ್ ಆಗಿದ್ದಾರೆ.
ಸಂಪಾಜೆ-ಸುಳ್ಯ ರಸ್ತೆಯಲ್ಲಿ KA09MG5880 ನಂಬರ್‌ನ ಕಾರಿನಲ್ಲಿ ಒಟ್ಟು ಏಳು ಮಂದಿ ಯುವಕರು ಪ್ರಯಾಣಿಸುತ್ತಿದ್ದರು. ಇವರಲ್ಲಿ ಐವರು ಕಾರಿನ ಸನ್ ರೂಫ್ ಮತ್ತು ಕಿಟಿಕಿಯಿಂದ ಹೊರಬಂದು ಡ್ಯಾನ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದರು. ಚಾಲಕ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಾ ಯುವಕರು ಪುಂಡಾಟ ಮೆರೆದಿದ್ದರು. ಕಾರಿನ ಹಿಂಬದಿ ಬರುತ್ತಿದ್ದ ವಾಹನದಲ್ಲಿದ್ದವರು ಇದರ ವೀಡಿಯೋ ಮಾಡಿದ್ದಾರೆ. ಈ ವೀಡಿಯೋ ವೈರಲ್ ಆಗಿತ್ತು.