-->
ಕಡಬ: ಫ್ರಿಡ್ಜ್‌ನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ- ಅರಣ್ಯ ಅಧಿಕಾರಿಗಳಿಂದ ದಾಳಿ

ಕಡಬ: ಫ್ರಿಡ್ಜ್‌ನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ- ಅರಣ್ಯ ಅಧಿಕಾರಿಗಳಿಂದ ದಾಳಿ


ಕಡಬ: ಮನೆಯೊಂದರ ಫ್ರಿಡ್ಜ್‌ನಲ್ಲಿ ಅಕ್ರಮವಾಗಿ ಇಟ್ಟಿದ್ಸ ಕಾಡುಪ್ರಾಣಿಯ ಮಾಂಸವನ್ನು ಪಂಜ ವಲಯ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಪಂಜ  ವಲಯ ಅರಣ್ಯಾಧಿಕಾರಿ ಸಂಧ್ಯಾ ಹಾಗೂ ಅವರ ತಂಡವು ಕಡಬದ ನೂಜಿಬಾಳ್ತಿಲ ಗ್ರಾಮದ ಪಟ್ಟಣ ತೇಗಿಲ್ ಕಳಜಾಲು ನಿವಾಸಿ ವರ್ಗಿಸ್ ತೋಮಸ್ ಎಂಬವರ ಮನೆಗೆ ದಾಳಿ ನಡೆಸಿದೆ. ಈ ವೇಳೆ ಮನೆಯ ಫ್ರಿಡ್ಜ್‌ನಲ್ಲಿ ಅಕ್ರಮವಾಗಿ ಇಟ್ಟಿದ್ದ ಕಾಡುಪ್ರಾಣಿಯ ಮಾಂಸ ಪತ್ತೆಯಾಗಿದೆ‌. ಮಾಂತ ತಂದಿರಿಸಿದ್ದ ಆರೋಪಿ ಪರಾರಿಯಾಗಿದ್ದಾನೆ‌. ಅರಣ್ಯಾಧಿಕಾರಿಗಳು ಸುಮಾರು 10 ಕೆಜಿ ಕಾಡುಪ್ರಾಣಿ ಮಾಂಸ ಹಾಗೂ ಬಂದೂಕನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪಂಜ ಉಪ ವಲಯ ಅರಣ್ಯಾಧಿಕಾರಿ ಅಜಿತ್, ಸುನಿಲ್, ಯಶೋಧರ ಮೊದಲಾದವರು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.

Ads on article

Advertise in articles 1

advertising articles 2

Advertise under the article